ಮಂಜೇಶ್ವರ: ಮಂಜೇಶ್ವರ ಸರ್ಕಾರಿ ಹೋಮಿಯೋಪತಿ ಡಿಸ್ಪೆನ್ಸರಿ ಮತ್ತು ಆಯುಷ್ಮಾನ್ ಆರೋಗ್ಯ ಮಂದಿರದ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಇತ್ತೀಚೆಗೆ ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಫಾತಿಮತ್ ಸೌರಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಕಡಪ್ಪುರಂ ಅಧ್ಯಕ್ಷತೆ ವಹಿಸಿದ್ದರು.
ಎಫ್‌ಎಚ್‌ಸಿ ವೈದ್ಯಾಧಿಕಾರಿ ಡಾ. ಪ್ರಭಾಕರ ರಾಯ್ ಅವರು ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ವಿಷಯದ ಕುರಿತು ಮಾತನಾಡಿದರು. ಆಯುರ್ವೇದ ಡಿಸ್ಪೆನ್ಸರಿಯ ವೈದ್ಯಾಧಿಕಾರಿ ಡಾ. ಶಿಮ್ನಾ ಸ್ವಾಗತಿಸಿದರು. ಪಂಚಾಯತ್ ಸದಸ್ಯರು ಮತ್ತು ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಹೋಮಿಯೋಪತಿ ಡಿಸ್ಪೆನ್ಸರಿಯ ವೈದ್ಯಾಧಿಕಾರಿ ಡಾ. ದೀಪ್ತಿ ಎಂ. ವಂದಿಸಿದರು.
ಕಾರ್ಯಕ್ರಮದ ಬಳಿಕ ಯೋಗಾ ತರಬೇತುದಾರರಾದ ಸುನಿತಾ ಕೆ. ಅವರು ಪಂಚಾಯತ್ ಸದಸ್ಯರು, ಹರಿತ ಕರ್ಮ ಸೇನಾ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರಿಗೆ ಯೋಗ ತರಬೇತಿ ನೀಡಿದರು.