ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ ಕೈಬಿಟ್ಟ ಬಳಿಕ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಧಮಾ೯ಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದ ಬೃಜೇಶ್ ಚೌಟ, ಶಾಸಕರುಗಳಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ಸೇರಿದಂತೆ ಕರಾವಳಿ ಭಾಗದ ಬಿಜೆಪಿ ಶಾಸಕರು, ಬಿಜೆಪಿ ಮಂಡಲ ಅಧ್ಪಕ್ಷ ಶ್ರೀನಿವಾಸ ರಾವ್ ಹಾಗೂ.ಪ್ರಮುಖ ನಾಯಕರುಗಳಾದ ಜಯಂತ್ ಕೋಟ್ಯಾನ್, ಜಯಂತ್ ಗೌಡ, ದಿನೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.