ಮಂಗಳೂರು: ನಗರದ ಹೊರವಲಯದ ಮುಡಿಪು ಸಮೀಪ ಆಟೋರಿಕ್ಷಾ ಡಿಕ್ಕಿಯಾಗಿ ಪಾದಚಾರಿ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಮುಡಿಪು ಮುಖ್ಯರಸ್ತೆ ಬದಿಯಲ್ಲಿ ವೃದ್ಧರು ನಡೆದುಕೊಂಡು ಹೋಗುತ್ತಿದ್ದ ವೇಳೆ, ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ಅವರ ಮೇಲೆ ಹರಿದಿದೆ. ಡಿಕ್ಕಿಯ ರಭಸಕ್ಕೆ ವೃದ್ಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಆಟೋರಿಕ್ಷಾ ಚಾಲಕನಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.ಘಟನೆ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.