ಬಂಟ್ವಾಳ: ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ, ವಾಮದಪದವು ಬಂಟ್ವಾಳ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ) ಬಂಟ್ವಾಳ ತಾಲೂಕು,ಅಖಿಲ್ಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.) ಬಂಟ್ವಾಳ ತಾಲೂಕು.ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಬಂಟ್ವಾಳ, ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ (ಕ್ಷೇಮ), ಆದಿನಾಥ ಪದ್ಮಾವತಿ ಅಮ್ಮನವರ ಬಸದಿ ಅಜ್ಜಿಬೆಟ್ಟು, ಕೃಷಿ ಪತ್ತಿನ ಸಹಕಾರಿ ಸಂಘ ವಾಮದಪದವು, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಹಾಗೂ ನವಜೀವನ ಸಮಿತಿ, ಬಂಟ್ವಾಳ ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ~ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಜರುಗುವ 2076ನೇ ಮದ್ಯವರ್ಜನ ಶಿಬಿರ ವಾಮದಪದವು ಬಸ್ತಿಕೋಡಿ ಶ್ರೀ ಪದ್ಮಾವತಿ ಸಭಾಭವನದಲ್ಲಿ ನಡೆಯಿತು.
ವಾಮದಪದವು ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷ ಶ್ರೀಪಾದ ಪಾಂಗಣ್ಣಾಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕುಡಿತದ ಚಟದಿಂದ ಜೀವನವನ್ನು ಕಳೆದುಕೊಂಡ ವ್ಯಕ್ತಿಯನ್ನು ಪರಿವರ್ತನೆ ಮಾಡುವ ಕಾರ್ಯ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ದಿ ಯೋಜನೆಯ ಮುಖಾಂತರ ನಡೆಯುತ್ತಿದೆ.ಇದು ಪುಣ್ಯದ ಕೆಲಸ ಎಂದು ಅವರು ಹೇಳಿದರು.
ಮದ್ಯ ಸೇವನೆ ಮಾಡುವ ವ್ಯಕ್ತಿಗಳು ದ್ವಂದದಲ್ಲಿರುತ್ತದೆ. ಅಂತಹ ವ್ಯಕ್ತಿಗಳ ಪರಿವರ್ತನೆ ಮಾಡಿ ಅವರಿಗೆ ನವ ಜೀವನವನ್ನು ನೀಡುವ ಮಹತ್ಕಾರ್ಯವನ್ನು ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯ ಎಂದು ತಿಳಿಸಿದರು.
ಉದ್ಯಮಿ ಹರೀಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ವ್ಯಸನ ಮುಕ್ತ ಸಮಾಜ ನಿರ್ಮಾಣದ ಕನಸು ನನಸುಗೊಳ್ಳಲಿ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ವೇದಿಕೆಯಲ್ಲಿ ಜನವೇದಿಕೆ ಟ್ರಸ್ಟ್ ಅಧ್ಯಕ್ಷ ರೋನಾಲ್ಡ್ ಡಿ.ಸೋಜ, ನಿಯೋಜಿತ ಅಧ್ಯಕ್ಷ ರಾಜರಾಮ್ ಶೆಟ್ಟಿ, ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ.ಬೂಡ ಅಧ್ಯಕ್ಷ ಬೇಬಿ ಕುಂದರ್, ಜಿ.ಪಂ.ಮಾಜಿ ಸದಸ್ಯರಾದ ಪದ್ಮಶೇಖರ್ ಜೈನ್, ಎಂ.ತುಂಗಪ್ಪ ಬಂಗೇರ, ಸುಲೋಚನಾ ಜಿ.ಕೆ.ಭಟ್, ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷ ಚಿದಾನಂದ ರೈ ಕಕ್ಯ, ನೀಲಕಂಠೇಶ್ವರ ದೇವಸ್ಥಾನದ ಅಧ್ಯಕ್ಷ ಗೋಪಾಲಕೃಷ್ಣ ಚೌಟ, ಕಾಡಬೆಟ್ಟು ಶೌರ್ಯ ಘಟಕದ ಪ್ರತಿನಿಧಿ ಪ್ರವೀಣ್ ಕಾಡಬೆಟ್ಟು, ಒಕ್ಕೂಟದ ಮಾಜಿ ಅಧ್ಯಕ್ಷರುಗಳಾದ ಸದಾನಂದ ನಾವೂರ, ಕೃಷ್ಣಪ್ಪ ಅಲ್ಲಿಪಾದೆ, ಜಗದೀಶ್ ಕೊಯಿಲ, ಮಾಣಿಕ್ಯರಾಜ್ ಜೈನ್, ಉದ್ಯಮಿ ಪುರುಷೋತ್ತಮ ಶೆಟ್ಟಿ ವಾಮದಪದವು, ಜನಜಾಗೃತಿ ಸದಸ್ಯ ಮದ್ಯವರ್ಜನಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ,ಆನಂದ ಆಚಾರ್ಯ, ಪುಂಜಾಲಕಟ್ಟೆ ಶೌರ್ಯ ಘಟಕದ ಪ್ರತಿನಿಧಿ ಮೋಹನ್ ಸಾಲಿಯಾನ್, ಜ.ಜಾ.ವೇ.ವಗ್ಗ ವಲಯಾಧ್ಯಕ್ಷ ಪುರುಷೋತ್ತಮ ಪೂಜಾರಿ ಸರಪಾಡಿ, ಶೌರ್ಯ ಕ್ಯಾಪ್ಟನ್ ಪ್ರಕಾಶ್ ಪೂಜಾರಿ, ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಶಿಬಿರಾಧಿಕಾರಿ ರಮೇಶ್, ಆರೋಗ್ಯ ಸಹಾಯಕಿ ಜಯಲಕ್ಮೀ ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ.ಉಪಸ್ಥಿತರಿದ್ದರು.
ಯೋಜನಾಧಿಕಾರಿ ಜಯಾನಂದ ಪಿ .ಸ್ವಾಗತಿಸಿದರು. ಸೇವ ಪ್ರತಿನಿಧಿ ವಂದಿಸಿದರು.
ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು .