ಬಜಾಲ್‌ನಲ್ಲಿ ‘ಸ್ವಚ್ಛತಾ ಹಿ ಸೇವಾ’ ಜಾಗೃತಿ ಜಾಥಾ

ಮಂಗಳೂರು, ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಬಜಾಲ್ ನಂತೂರಿನ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಶನಿವಾರ ‘ಸ್ವಚ್ಛತಾ ಹಿ ಸೇವಾ’ ಧ್ಯೇಯದಡಿ ಫೈಸಲ್ ನಗರದ ಸುತ್ತಮುತ್ತ ಸ್ವಚ್ಛತಾ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.

ಜಾಥಾಕ್ಕೆ ಚಾಲನೆ ನೀಡಿದ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು ಹಾಗೂ ಸ್ಥಳೀಯ ಜುಮ್ಮಾ ಮಸೀದಿಯ ಅಧ್ಯಕ್ಷರಾದ ಜನಾಬ್ ಅಬ್ದುಲ್ ರವೂಫ್ ಅವರು ಮಾತನಾಡಿ, ಪ್ರತಿಯೊಂದು ಮನೆಯವರು ಹಸಿ ಕಸ ಮತ್ತು ಒಣ ಕಸವನ್ನು ಸಮರ್ಪಕವಾಗಿ ವಿಂಗಡಿಸಿ ಮಹಾನಗರ ಪಾಲಿಕೆಯೊಂದಿಗೆ ಕೈಜೋಡಿಸುವ ಮೂಲಕ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿ ಜನಾಬ್ ಅಶ್ರಫ್ ಕೆ.ಇ., ಜುಮ್ಮಾ ಮಸೀದಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯರಾದ ಎ.ಎನ್. ಅಬ್ಬಾಸ್, ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ನಿಕಟಪೂರ್ವ ಕಾರ್ಯದರ್ಶಿ ಅಶ್ರಫ್ ತೋಟ ಉಪಸ್ಥಿತರಿದ್ದು, ಸ್ವಚ್ಛತಾ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಈ ವೇಳೆ ಶಾಲೆಯ ವಿದ್ಯಾರ್ಥಿನಿ ರಿನಾಝ್ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಮನಮುಟ್ಟುವ ಮಾತುಗಳನ್ನಾಡಿ ನೆರೆದವರ ಮೆಚ್ಚುಗೆಗೆ ಪಾತ್ರರಾದರು.

ಜಾಥಾದಲ್ಲಿ ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ, ಸ್ಥಳೀಯ ನಿವಾಸಿಗಳು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ಸ್ವಚ್ಛತಾ ಜಾಗೃತಿ ಅಭಿಯಾನವನ್ನು ಯಶಸ್ವಿಗೊಳಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!