ಕೆಲಸಕ್ಕೆಂದು ತೆರಳಿದ್ದ ಮೇಸ್ತ್ರಿ ಕಾಡಿನಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಎಂದಿನಂತೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದ ಕಲ್ಲುಕಟ್ಟುವ ಮೇಸ್ತ್ರಿ ಬಿ.ಸಿ. ಚಂದ್ರ (56) ಅವರು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

ಬಳವಂತಡ್ಕದ ನಿವಾಸಿಯಾದ ಇವರು, ಶುಕ್ರವಾರ ಬೆಳಗ್ಗೆ ಕೆಲಸಕ್ಕೆಂದು ತೆರಳಿದವರು ವಾಪಸ್ಸಾಗಿರಲಿಲ್ಲ. ಬಳಿಕ ಅರಣ್ಯ ಪ್ರದೇಶದಲ್ಲಿ ಕಟ್ಟಿಗೆ ಸಂಗ್ರಹಿಸಲು ತೆರಳಿದ ಸ್ಥಳೀಯರಿಗೆ, ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಶವ ಪತ್ತೆಯಾಗಿದೆ.

​ಘಟನಾ ಸ್ಥಳಕ್ಕೆ ಅಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ರತನ್ ಕುಮಾರ್ ನಾಯ್ಕ್ ನೀಡಿದ ದೂರಿನ ಮೇರೆಗೆ ಅಡೂರು ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅವರ ಅಕಾಲಿಕ ನಿಧನವು ಸ್ಥಳೀಯರಲ್ಲಿ ಆಘಾತವನ್ನುಂಟುಮಾಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!