ಕಂಕನಾಡಿ ಸಮೀಪ ತಡೆಗೋಡೆ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ಮೃತ್ಯು – ಶಾಸಕ ವೇದವ್ಯಾಸ ಕಾಮತ್ ಸಂತಾಪ

ನಗರದಲ್ಲಿ ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಂಕನಾಡಿ ಸಮೀಪ ತಡೆಗೋಡೆ ಕುಸಿದು ಮನೆ ಮೇಲೆ ಬಿದ್ದು ಸಂಭವಿಸಿದ ದುರಂತದಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಮೃತರ ಕುಟುಂಬಕ್ಕೆ ತಕ್ಷಣ ಸೂಕ್ತ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿ, ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ಪ್ರಮಾಣ ಮುಂದುವರಿಯುವ ಸಾಧ್ಯತೆ ಇರುವುದರಿಂದ, ಅಪಾಯ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಜಿಲ್ಲಾಡಳಿತಕ್ಕೆ ಶಾಸಕರು ಮನವಿ ಮಾಡಿದ್ದಾರೆ.

ಜನರು ಸಹ ಎಚ್ಚರಿಕೆಯಿಂದಿದ್ದು, ಭಾರೀ ಮಳೆಯ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!