ಉಡುಪಿ ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್‌ ಅಭಿಯಾನಕ್ಕೆ ಚಾಲನೆ

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ-ಮಂತ್ರಾಕ್ಷತೆ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಎಸ್‌ಐಆರ್‌ (SIR) ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಅಭಿಯಾನವು ಯಶಸ್ವಿಯಾಗಿ ನಡೆಯಲೆಂದು ಶ್ರೀಪಾದರು ಆಶೀರ್ವಚನ ನೀಡಿದರು.


ಎಸ್‌ಐಆ‌ರ್ ಅಭಿಯಾನವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಹಾಗೂ ಸಂಬಂಧಿತ ಅಧಿಕಾರಿಗಳು ಸಹಕರಿಸುವಂತೆ ಮನವಿ ಮಾಡಿದರು. ಸಮಾಜದ ಪ್ರತಿಯೊಬ್ಬರೂ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅದರ ಉದ್ದೇಶವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಶ್ರೀಕೃಷ್ಣ ಮಠದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು

SHARE
Loading spinner

Leave a Reply

Your email address will not be published. Required fields are marked *

error: Content is protected !!