ಟೆಹರಾನ್: ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಯಾವುದೇ ಯುರೋಪಿಯನ್ ದೇಶಕ್ಕೆ ಅಧಿಕೃತ ಆಹ್ವಾನ ಕಳುಹಿಸದಿರಲು ಇರಾನ್ ಸರ್ಕಾರ ನಿರ್ಧರಿಸಿದೆ.
ಇರಾನ್ ವಿರುದ್ಧದ ನೀತಿಗಳನ್ನು ಬೆಂಬಲಿಸಿದ ಹಾಗೂ ಸಂಕಷ್ಟದ ಸಂದರ್ಭದಲ್ಲಿ ಬೆಂಬಲ ನೀಡದ ದೇಶಗಳನ್ನು ಅಂತ್ಯಕ್ರಿಯೆಗೆ ಆಹ್ವಾನಿಸಲಾಗುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ.

ಖಮೇನಿ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಜುಲೈ 4ರಂದು ಆರಂಭವಾಗಲಿದ್ದು, ಜುಲೈ 9ರಂದು ಮಶಾದ್‌ನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
ಭಾರತದ ಪರವಾಗಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪಬಿತ್ರ ಮಾರ್ಗರಿಟಾ ಹಾಗೂ ಬಿಹಾರ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಭಾರತವನ್ನು ಪ್ರತಿನಿಧಿಸಲಿದ್ದಾರೆ.


