ತಡೆಗೋಡೆ ದುರಂತ ಸಂತ್ರಸ್ತರಿಗೆ ₹5 ಲಕ್ಷ ಪರಿಹಾರ ಚೆಕ್ ವಿತರಣೆ


ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ: ಸಚಿವ ಯು.ಟಿ. ಖಾದರ್

ಮಂಗಳೂರು: ತಡೆಗೋಡೆ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ತಲಾ ₹5 ಲಕ್ಷ ಪರಿಹಾರ ಮೊತ್ತದ ಚೆಕ್‌ಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದರು.

ಪರಿಹಾರ ವಿತರಣೆಯ ವೇಳೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ ನರ್ವಾಡೆ ಕಾರ್ಬಾರಿ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಯು.ಟಿ. ಖಾದರ್, ದುರಂತದಲ್ಲಿ ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು. ಸಂತ್ರಸ್ತ ಕುಟುಂಬಗಳೊಂದಿಗೆ ಸರ್ಕಾರ ಸದಾ ನಿಲ್ಲಲಿದ್ದು, ಅಗತ್ಯವಿರುವ ಎಲ್ಲ ರೀತಿಯ ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!