ಕೊಚ್ಚಿ: ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಯ ವಿವಾಹ ಪ್ರಕರಣದಲ್ಲಿ ಪತಿ ಮೊಹಮ್ಮದ್ ಫರ್ಹಾನ್ ಅವರಿಗೆ ಕಾನೂನು ಹಿನ್ನಡೆಯಾಗಿದೆ. ಬಂಧನಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದೆ.

ಪ್ರಕರಣವು ಮಧ್ಯಪ್ರದೇಶ ಹೈಕೋರ್ಟ್ ವ್ಯಾಪ್ತಿಗೆ ಸೇರಿರುವುದರಿಂದ, ಕೇರಳ ಹೈಕೋರ್ಟ್‌ಗೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಅಧಿಕಾರವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆದ್ದರಿಂದ ಮಧ್ಯಪ್ರದೇಶ ಹೈಕೋರ್ಟ್‌ನನ್ನೇ ಸಂಪರ್ಕಿಸುವಂತೆ ಸೂಚಿಸಿದೆ.
ಈ ಮೊದಲು ಫರ್ಹಾನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಧ್ಯಪ್ರದೇಶದ ವಿಶೇಷ ನ್ಯಾಯಾಲಯ ಕೂಡ ತಿರಸ್ಕರಿಸಿತ್ತು. ಅದರ ನಂತರ ಅವರು ಮತ್ತೆ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರೂ, ಅದನ್ನೂ ನ್ಯಾಯಾಲಯ ವಜಾಗೊಳಿಸಿದೆ.



