ಬೆಂಗಳೂರು: ಬೆಂಗಳೂರಿನ ಇಸ್ರೋ (ISRO) ಮುಖ್ಯ ಕಚೇರಿಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ಕಚೇರಿಯಿಂದ ಸುರಕ್ಷಿತವಾಗಿ ಹೊರಗೆ ಸ್ಥಳಾಂತರಿಸಲಾಗಿದೆ.

ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಇಸ್ರೋ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಹಾಗೂ ಸಂಸ್ಥೆಯನ್ನು ಸ್ಫೋಟಿಸುವುದಾಗಿ ಅದರಲ್ಲಿ ಉಲ್ಲೇಖಿಸಲಾಗಿದೆ.
ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸುತ್ತಿದ್ದಾರೆ.
ಈ ಬೆದರಿಕೆ ಸಂದೇಶವು ನಕಲಿಯೇ ಎಂಬ ಅನುಮಾನವೂ ಪೊಲೀಸರಿಗೆ ಇದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.


