ಕಾಸರಗೋಡು, ಜು. 2: ಸೋಶಿಯಲ್ ಮೀಡಿಯಾ ಇನ್‌ಫ್ಲುವೆನ್ಸರ್ ಹೆಲೆನ್ ಆಫ್ ಸ್ಪಾರ್ಟಾ (ಧನ್ಯ ಎಸ್. ರಾಜೇಶ್) ಅವರನ್ನು ಮದ್ಯಪಾನ ಮಾಡಿ ವಾಹನ ಚಲಾಯಿಸಿದ (ಡ್ರಿಂಕ್ ಅಂಡ್ ಡ್ರೈವ್) ಆರೋಪದ ಹಿನ್ನೆಲೆಯಲ್ಲಿ ಕಾಸರಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ವಾಹನ ತಪಾಸಣೆ ವೇಳೆ ಪೊಲೀಸರು ಅವರ ಕಾರನ್ನು ತಡೆದು ಪರಿಶೀಲಿಸಿದ್ದು, ಪರೀಕ್ಷೆಯಲ್ಲಿ ಅವರು ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ ಎನ್ನಲಾಗಿದೆ. ಬಳಿಕ ಮೋಟಾರು ವಾಹನ ಕಾಯ್ದೆಯ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಿಸಲಾಗಿದೆ.


