ಪಹಲ್ಗಾಮ್ ಉಗ್ರರ ದಾಳಿ: ಗುಪ್ತಚರ ವೈಫಲ್ಯವೇ ಕಾರಣ, ಯಾರನ್ನಾದರೂ ಹೊಣೆಗಾರರನ್ನಾಗಿ ಮಾಡಬೇಕು-ಮಾಜಿ ಸೇನಾ ಮುಖ್ಯಸ್ಥ

ಕೋಲ್ಕತ್ತಾ: ಪಹಲ್ಗಾಮ್ ಉಗ್ರರ ದಾಳಿಗೆ ಗುಪ್ತಚರ ವೈಫಲ್ಯಯೇ ಕಾರಣ ಎಂದು ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಶಂಕರ್ ರಾಯ್ ಚೌಧರಿ ಶುಕ್ರವಾರ ಹೇಳಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ದೇಶದ 18 ನೇ ಸೇನಾ ಮುಖ್ಯಸ್ಥ ರಾಯ್‌ ಚೌಧರಿ, ಉಗ್ರ ದಾಳಿಗೆ ಗುಪ್ತಚರ ವೈಫಲ್ಯವೇ ಪ್ರಮುಖ ಕಾರಣವಾಗಿದೆ. ಲೋಪದೋಷಗಳಿಗೆ ಯಾರಾದರೂ ಉತ್ತರಿಸಬೇಕು. ನಿರ್ಲಕ್ಷ್ಯಕ್ಕೆ ಖಂಡಿತವಾಗಿಯೂ ಯಾರಾದರೂ ಜವಾಬ್ದಾರರಾಗಿರುತ್ತಾರೆ ಮತ್ತು ಪರಿಣಾಮಗಳಿಗೆ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಹೇಳಿದರು.

ಪಹಲ್ಗಾಮ್ ದಾಳಿಯ ಹಿಂದೆ ಪಾಕಿಸ್ತಾನ ಮತ್ತು ಅದರ ಗುಪ್ತಚರ ಸಂಸ್ಥೆ ISI (ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್) ಪಾತ್ರವಿದೆ. ಎಲ್ಲೋ ಸಮಧಾನ ಇರಬೇಕು. ಅನೇಕ ನುಸುಳುಕೋರರು ಹೇಗೆ ಪ್ರವೇಶಿಸಿದರು? ಇದನ್ನು ತನಿಖೆ ಮಾಡಬೇಕಾಗಿದೆ” ಎಂದು ಅವರು ಹೇಳಿದರು. ಲಷ್ಕರ್-ಎ-ತೊಯ್ಬಾ, ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!