ಬಂಟ್ವಾಳ: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 204/2018ರ, ಭಾರತೀಯ ದಂಡ ಸಂಹಿತೆ ಕಲಂ 379ರಡಿ ದಾಖಲಾಗಿದ್ದ ಪ್ರಕರಣದ ಆರೋಪಿ ಬೆಳ್ತಂಗಡಿ ನಿವಾಸಿ ರಾಜೇಶ್ (41) ಎಂಬಾತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ.
ವಿಟ್ಲ ಪೊಲೀಸ್ ಠಾಣೆಯ ಎಎಸ್‌ಐ ಜಯರಾಮ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿಪಿಸಿ ವೆಂಕಪ್ಪ ಹಾಗೂ ಸಿಪಿಸಿ ಶಿವಾನಂದ ಅವರು ಜುಲೈ 6ರಂದು ಮಂಗಳೂರಿನಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


