ಕಾಸರಗೋಡು, ಜು. 8: ಜುಲೈ 26ರಂದು ನಡೆಯಲಿರುವ ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನದ ಪೂರ್ವಸಿದ್ಧತೆಗಳ ಅಂಗವಾಗಿ ಸಮಾಲೋಚನಾ ಸಭೆಯನ್ನು ಇಂದು (ಬುಧವಾರ) ಸಂಜೆ 7.30ಕ್ಕೆ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದ ಗ್ರಂಥಾಲಯದಲ್ಲಿ ಆಯೋಜಿಸಲಾಗಿದೆ.
ಸಮ್ಮೇಳನದ ಯಶಸ್ವಿ ಆಯೋಜನೆಗೆ ಅಗತ್ಯ ಸಲಹೆ-ಸೂಚನೆಗಳನ್ನು ಸಂಗ್ರಹಿಸುವುದು, ವಿವಿಧ ಉಪಸಮಿತಿಗಳ ರಚನೆ ಹಾಗೂ ಜವಾಬ್ದಾರಿಗಳ ಹಂಚಿಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನ ಸಮಿತಿಯ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಕನ್ನಡ ಭವನದ ಎಲ್ಲಾ ಪದಾಧಿಕಾರಿಗಳು, ಸಮ್ಮೇಳನ ಸಮಿತಿಯ ಸದಸ್ಯರು ಹಾಗೂ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.


