ಕಾಸರಗೋಡು, ಜು. 8: ಶಿವಮೊಗ್ಗ ಜಿಲ್ಲೆಯ ಇಂದಿರಾ ಪ್ರಕಾಶ್ ಅಕಾಡೆಮಿಯ ಸಂಸ್ಥಾಪಕರೂ, ಸಾಹಿತಿಯೂ ಆಗಿರುವ ಡಾ. ಇಂದಿರಾ ಪ್ರಕಾಶ್ ಎಸ್.ಎಸ್. ಅವರಿಗೆ ಕನ್ನಡ ಭವನದ ಪ್ರತಿಷ್ಠಿತ ‘ಅಂತರ್ ರಾಜ್ಯ ಕನ್ನಡ ಪಯಸ್ವಿನಿ ಸಾಹಿತ್ಯ ರತ್ನ’ ಅಚೀವ್ಮೆಂಟ್ ಅವಾರ್ಡ್-2026 ಘೋಷಿಸಲಾಗಿದೆ.
ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಸಮಾರಂಭದ ಅಂಗವಾಗಿ ನಡೆಯಲಿರುವ ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಈ ಕುರಿತು ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನ ಸಮಿತಿಯ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


