ಕಾಸರಗೋಡು: ಸಾಹಿತಿ, ಸಾಹಿತ್ಯ ಪರಿಪೋಷಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಕೊಲಚಪ್ಪೆ ಗೋವಿಂದ ಭಟ್ ಅವರು ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026’ಗೆ ಆಯ್ಕೆಯಾಗಿದ್ದಾರೆ.
ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಸಮಾರಂಭದ ಅಂಗವಾಗಿ ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


