ಕಾಸರಗೋಡು, ಜು. 10: ಕೊಪ್ಪಳ ಜಿಲ್ಲೆಯ ಸಾಹಿತಿ ಹಾಗೂ ಸಮಾಜಸೇವಕಿ ಶ್ರೀಮತಿ ಕೋಮಲ ಕೆ. ಕುದುರೆಮೋತಿ ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತರ್ರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026” ಘೋಷಿಸಲಾಗಿದೆ.
ಜುಲೈ 26ರಂದು ಕಾಸರಗೋಡು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಸಮಾರಂಭ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಹಿತ್ಯ ಹಾಗೂ ಸಮಾಜಸೇವಾ ಕ್ಷೇತ್ರಗಳಲ್ಲಿ ಶ್ರೀಮತಿ ಕೋಮಲ ಕೆ. ಕುದುರೆಮೋತಿ ಅವರು ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


