ಮಣಿಪಾಲ: ಈಶ್ವರ ನಗರದ ಕುಡಿಯುವ ನೀರಿನ ಘಟಕಕ್ಕೆ ನುಗ್ಗಿದ ಕಾರು : ವಿದ್ಯಾರ್ಥಿಗಳಿಗೆ ಗಾಯ

ಉಡುಪಿ: ಮಣಿಪಾಲದ ಈಶ್ವರ ನಗರದಲ್ಲಿರುವ ನಗರಸಭೆಯ ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ಮಧ್ಯರಾತ್ರಿ ಕಾರೊಂದು ನುಗ್ಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ.


ಮಣಿಪಾಲದಿಂದ ಆತ್ರಾಡಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 169A ಮೂಲಕ ಸಾಗುತ್ತಿದ್ದ ಕಾರು ದಾರಿ ತಪ್ಪಿ ಹೆದ್ದಾರಿಯಿಂದ ಹೊರಬಂದು ನೇರವಾಗಿ ಕುಡಿಯುವ ನೀರಿನ ಘಟಕದೊಳಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಏರ್‌ಬ್ಯಾಗ್‌ಗಳು ತೆರೆದಿದ್ದು, ಕಾರಿನಲ್ಲಿದ್ದವರಿಗೆ ತಲೆಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಸ್ಥಳೀಯರ ಪ್ರಕಾರ, ಇದೇ ಸ್ಥಳದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿ 169A ಕಾಮಗಾರಿ ಅಪೂರ್ಣವಾಗಿರುವುದು, ಅಗತ್ಯ ತಡೆಗೋಡೆ ಹಾಗೂ ಎಚ್ಚರಿಕೆ ವ್ಯವಸ್ಥೆಗಳ ಕೊರತೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!