ಕೊಳ್ನಾಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮುಖಂಡರಿಂದ SIR ನಮೂನೆ ಭರ್ತಿ ಹೆಲ್ಪ್ ಡೆಸ್ಕ್‌ಗಳಿಗೆ ಭೇಟಿ – ಪ್ರಗತಿ ಪರಿಶೀಲನೆ

ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾದ ಎಂ.ಎಸ್. ಮಹಮ್ಮದ್ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು ಕೊಳ್ನಾಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕನ್ಯಾನ, ಕರೋಪಾಡಿ, ಸಾಲೆತ್ತೂರು, ಕೊಳ್ನಾಡು ಹಾಗೂ ಮಂಚಿ ಗ್ರಾಮಗಳಲ್ಲಿರುವ SIR ನಮೂನೆ ಭರ್ತಿ ಹೆಲ್ಪ್ ಡೆಸ್ಕ್ ಕೇಂದ್ರಗಳಿಗೆ ಭೇಟಿ ನೀಡಿ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು.


ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ಹೆಲ್ಪ್ ಡೆಸ್ಕ್‌ಗಳಲ್ಲಿ ನಡೆಯುತ್ತಿರುವ ಕಾರ್ಯವನ್ನು ಅವಲೋಕಿಸಿ, ಕಾರ್ಯಕರ್ತರ ಉತ್ಸಾಹ ಹಾಗೂ ಆಯಾ ಗ್ರಾಮದ ಕಾಂಗ್ರೆಸ್ ಮುಖಂಡರುಗಳ ಸಂಘಟನಾ ಸಾಮರ್ಥ್ಯ ಮತ್ತು ಕಾರ್ಯವೈಖರಿಯನ್ನು ಶ್ಲಾಘಿಸಿದರು.

SIR ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಎಲ್ಲ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಉಳಿದಿರುವ ಕಾರ್ಯವನ್ನೂ ಇದೇ ಉತ್ಸಾಹದಿಂದ ಪೂರ್ಣಗೊಳಿಸುವಂತೆ ಕರೆ ನೀಡಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!