ಪುರುಷರಕಟ್ಟೆ ಘಟನೆ: ಸಂತ್ರಸ್ತ ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ, ನ್ಯಾಯಕ್ಕೆ ಆಗ್ರಹ

ಪುತ್ತೂರು ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಹಿಂದೂ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷದ್ ಪ್ರಮುಖರು ಭೇಟಿ ನೀಡಿ, ಪೋಷಕರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಲಾಯಿತು.
ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ ಯುವತಿಯರಲ್ಲಿ ಪ್ರಾಣಭಯ ಉಂಟುಮಾಡಿದ ಘಟನೆಯನ್ನು ಕೇವಲ ‘ತಪ್ಪು ಗ್ರಹಿಕೆ’ ಎಂದು ಬಿಂಬಿಸಿ, ಆರೋಪಿಗಳನ್ನು ರಕ್ಷಿಸಲು ನಡೆಯುತ್ತಿರುವ ರಾಜಕೀಯ ಸಂಧಾನದ ಪ್ರಯತ್ನವು ಸರಿಯಲ್ಲ.

ಈ ಘಟನೆಯ ಕುರಿತು ಪೊಲೀಸ್ ಇಲಾಖೆಯು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದ ಯುವತಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು. ಹಾಗೆಯೇ, ಸಂತ್ರಸ್ತ ಯುವತಿ ಮತ್ತು ಆಕೆಯ ಕುಟುಂಬದ ಮೇಲೆ ದಾಖಲಿಸಲಾಗಿರುವ ಸುಳ್ಳು ಪ್ರಕರಣವನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ವಿಶ್ವ ಹಿಂದೂ ಪರಿಷತ್ ಬಲವಾಗಿ ಆಗ್ರಹಿಸುತ್ತದೆ.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ನ ಪ್ರಾಂತ ಸಹ ಕಾರ್ಯದರ್ಶಿಗಳಾದ ಶರಣ್ ಪಂಪವೆಲ್, ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗ ಸಹ ಕಾರ್ಯದರ್ಶಿಯಾದ ಶಿವಾನಂದ ಮೆಂಡನ್, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಹಾಗೂ ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಟಾಲಿ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!