ಬಂಟ್ವಾಳ: ವಿಶ್ವಹಿಂದೂ ಪರಿಷದ್ ಹಾಗೂ ಭಜರಂಗದಳದ ಸೇವಾ ಸಪ್ತಾಹದ ಅಂಗವಾಗಿ ವಿಶ್ವಹಿಂದೂ ಪರಿಷದ್–ಭಜರಂಗದಳ ಕುಂಟಲಪಲ್ಕೆ ಘಟಕ, ಬಂಟ್ವಾಳ ಪ್ರಖಂಡದ ವತಿಯಿಂದ ಗೋಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಶೇಷ “ಗೋವಿಗಾಗಿ ಮೇವು” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಭಾಗವಾಗಿ ಒಂದು ಪಿಕಪ್ ತುಂಬ ಹಸಿ ಹುಲ್ಲನ್ನು ಪಜೀರು ಗೋಶಾಲೆಗೆ ಹಸ್ತಾಂತರಿಸಲಾಯಿತು. ಗೋಸೇವೆಯನ್ನು ಸಮಾಜದ ಪ್ರತಿಯೊಬ್ಬರೂ ತಮ್ಮ ಕರ್ತವ್ಯವೆಂದು ಪರಿಗಣಿಸಬೇಕು ಎಂಬ ಸಂದೇಶದೊಂದಿಗೆ ಈ ಸೇವಾ ಕಾರ್ಯವನ್ನು ಆಯೋಜಿಸಲಾಗಿದ್ದು, ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಪ್ರಖಂಡದ ಅಧ್ಯಕ್ಷ ಪ್ರಸಾದ್ ಕುಮಾರ್ ರೈ, ಸಂತೋಷ್ ಸರಪಾಡಿ, ದೀಪಕ್ ಅಜೆಕಲ, ತಿಲಕ್ ಕಿಣಿ, ಪ್ರವೀಣ್ ಕುಲಾಲ್ (ಕುಂಟಲಪಲ್ಕೆ) ಉಪಸ್ಥಿತರಿದ್ದು, ಸೇವಾ ಕಾರ್ಯಕ್ಕೆ ಶುಭ ಹಾರೈಸಿದರು.

ಘಟಕದ ಉಪಾಧ್ಯಕ್ಷ ಚಂದ್ರಹಾಸ ರೈ ಮೂಲಕಜೆ, ಬೇಬಿರಾಜ್ ಪೂಜಾರಿ, ದೀಕ್ಷಿತ್ ಬಸದಿ, ದೀಕ್ಷಿತ್ ಪೂಜಾರಿ (ಗೆಣಿ), ಅಕ್ಷಯ್ ರೈ, ಸುಶಾನ್ ಶೆಟ್ಟಿ, ಪ್ರಶಾಂತ್ ಕುಲಾಲ್ (ಮರಾಯಿದೊಟ್ಟು), ವಿದ್ಯಾರ್ಥಿ ಪ್ರಮುಖ್ ಅಜ್ಞಾನ್ ರೈ ಹಾಗೂ ಮೋನಪ್ಪ ಪೂಜಾರಿ (ವಾರಂಬು) ಸೇರಿದಂತೆ ಹಲವಾರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಗೋಶಾಲೆಗೆ ಮೇವು ಸಾಗಿಸುವ ಕಾರ್ಯದಲ್ಲಿ ಸಹಕರಿಸಿದರು.
ಸೇವಾ ಸಪ್ತಾಹದ ಅಂಗವಾಗಿ ಸಮಾಜಮುಖಿ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿರುವ ವಿಶ್ವಹಿಂದೂ ಪರಿಷದ್ ಹಾಗೂ ಭಜರಂಗದಳದ ಈ ಗೋಸೇವಾ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು

