ಕಾಸರಗೋಡು, ಜು. 15: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಪ್ರಥಮ ಶ್ರೇಣಿಯ ನವ ಕವಯತ್ರಿ ರಮ್ಯ ರಘುಪತಿ ಕೊಕ್ಕಡ ಅವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’ ಘೋಷಿಸಲಾಗಿದೆ.

ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಆಯೋಜಿಸಲಾಗಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಸಾಹಿತ್ಯ ಕ್ಷೇತ್ರದಲ್ಲಿ ರಮ್ಯ ರಘುಪತಿ ಕೊಕ್ಕಡ ಅವರು ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

