ಜುಲೈ 17ಕ್ಕೆ ತೆರೆಗೆ ‘ಅಚ್ಯುತ ಅವತಾರಂ’ – ಗ್ರಾಮೀಣ ಕಥಾಹಂದರದೊಂದಿಗೆ ಸೈಬರ್ ಕ್ರೈಮ್ ಥ್ರಿಲ್ಲರ್

ಕನ್ನಡದ ಬರಹಗಾರ ಹಾಗೂ ಚಲನಚಿತ್ರ ನಿರ್ಮಾಪಕ ಪುನೀತ್ ಅವರು ‘ಅಚ್ಯುತ ಅವತಾರಂ’ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಸೈಬರ್ ಅಪರಾಧ ಮತ್ತು ಡಿಜಿಟಲ್ ವಂಚನೆಗಳು ಗ್ರಾಮೀಣ ಜನರ ಬದುಕಿನ ಮೇಲೆ ಬೀರುವ ಪರಿಣಾಮವನ್ನು ಥ್ರಿಲ್ಲರ್ ಶೈಲಿಯಲ್ಲಿ ಕಟ್ಟಿಕೊಡುವ ಈ ಚಿತ್ರ ವಿಭಿನ್ನ ಕಥಾಹಂದರದ ಮೂಲಕ ಗಮನ ಸೆಳೆಯುತ್ತಿದೆ.

ಚಿತ್ರದಲ್ಲಿ ಖ್ಯಾತ ಶಾಸ್ತ್ರೀಯ ನೃತ್ಯಗಾರ್ತಿ ಮಾಳವಿಕಾ ನಂದನ್ ನಾಯಕಿಯಾಗಿ ನಟಿಸಿದ್ದು, ಅವರೊಂದಿಗೆ ‘ಕಾಂತಾರ’ ಖ್ಯಾತಿಯ ಹಿರಿಯ ನಟ ಅವಿನಾಶ್ ಹಾಗೂ ಸೀಮಾ ಜಿ. ನಾಯರ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಮೂಲತಃ ಮಲಯಾಳಂ ಭಾಷೆಯಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ.

ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಛಾಯಾಗ್ರಾಹಕ ಆನಂದ್ ಮೀನಾಕ್ಷಿ ಅವರ ಛಾಯಾಗ್ರಹಣವಿದ್ದು, ಪ್ರಸನ್ನ ಕುಮಾರ್ ಎಂ.ಎಸ್. ಸಂಗೀತ ಸಂಯೋಜಿಸಿದ್ದಾರೆ.

ರೇರಾ ವೆಂಚರ್ಸ್ (Rayra Ventures) ಬ್ಯಾನರ್ ಅಡಿಯಲ್ಲಿ ರಮೇಶ್ ಸಿ., ರುದ್ರಮೂರ್ತಿ ಹಾಗೂ ರಾಕೇಶ್ ಆರ್. ಅವರು ಚಿತ್ರವನ್ನು ನಿರ್ಮಿಸಿದ್ದಾರೆ.

ಗ್ರಾಮೀಣ ಸಂಸ್ಕೃತಿ, ಭಾವನಾತ್ಮಕ ಕಥಾಹಂದರ ಮತ್ತು ಸೈಬರ್ ಕ್ರೈಮ್‌ನ ರೋಚಕ ಅಂಶಗಳನ್ನು ಒಟ್ಟುಗೂಡಿಸಿರುವ ‘ಅಚ್ಯುತ ಅವತಾರಂ’ ಇದೇ ಜುಲೈ 17ರಂದು ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಪ್ರೇಕ್ಷಕರನ್ನು ಎಷ್ಟರ ಮಟ್ಟಿಗೆ ಸೆಳೆಯಲಿದೆ ಎಂಬುದನ್ನು ಕಾದುನೋಡಬೇಕಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!