ಇರಾನ್‌ಗೆ ಟ್ರಂಪ್ ಮತ್ತೊಮ್ಮೆ ಕಠಿಣ ಎಚ್ಚರಿಕೆ

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಗೆ ಯಾವುದೇ ಗಡುವು ನಿಗದಿಪಡಿಸಲು ಇಷ್ಟವಿಲ್ಲ ಎಂದು ಹೇಳಿದ ಟ್ರಂಪ್, “ಪರಿಸ್ಥಿತಿ ಅವರಿಗೆ ಚೆನ್ನಾಗಿ ಗೊತ್ತಿದೆ. ಅವರು ಎಚ್ಚರಿಕೆಯಿಂದ ವರ್ತಿಸಬೇಕು” ಎಂದರು.

ಇರಾನ್ ಮಾತುಕತೆಗೆ ಮುಂದಾಗದಿದ್ದರೆ ವಿದ್ಯುತ್ ಸ್ಥಾವರಗಳು ಮತ್ತು ಪ್ರಮುಖ ಮೂಲಸೌಕರ್ಯಗಳ ಮೇಲೆ ದಾಳಿ ಮುಂದುವರಿಯಲಿದೆ ಎಂದು ಅವರು ಎಚ್ಚರಿಕೆ ನೀಡಿದರು. ಸೇನಾ ಕಾರ್ಯಾಚರಣೆ ತಾವು ನಿರ್ಧರಿಸುವವರೆಗೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ ಟ್ರಂಪ್, ಅಗತ್ಯವಿದ್ದರೆ ನೆಲದ ಮೇಲಿನ ಸೇನಾ ಕಾರ್ಯಾಚರಣೆಯ ಸಾಧ್ಯತೆಯನ್ನೂ ಸಂಪೂರ್ಣವಾಗಿ ತಳ್ಳಿಹಾಕಲಿಲ್ಲ.

ಇದೇ ವೇಳೆ, ನಾಗರಿಕರಿಗೆ ಹಾನಿಯಾಗದಂತೆ ಸಾಧ್ಯವಾದಷ್ಟು ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ ಎಂದು ಟ್ರಂಪ್ ತಿಳಿಸಿದರು.ಟ್ರಂಪ್ ಅವರ ಈ ಹೇಳಿಕೆ ಪಶ್ಚಿಮ ಏಷ್ಯಾದಲ್ಲಿ ಈಗಾಗಲೇ ಉದ್ವಿಗ್ನವಾಗಿರುವ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸುವ ಸಾಧ್ಯತೆ ಇದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!