ಶಸ್ತ್ರಚಿಕಿತ್ಸೆ ವೇಳೆ ಬಾಲಕನ ಸಾವು; ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆಯಲ್ಲಿ ಸಂಘರ್ಷ: ಪೊಲೀಸರಿಂದ ಲಾಠಿಚಾರ್ಜ್

ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ಒಂಬತ್ತು ವರ್ಷದ ಬಾಲಕ ಮುಹಮ್ಮದ್ ಇಯಾಸ್ ಸಾವನ್ನಪ್ಪಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಡಿವೈಎಫ್‌ಐ ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾರಿ ಸಂಘರ್ಷ ಉಂಟಾಗಿದೆ.

​ಹೊಸ ಬಸ್ ನಿಲ್ದಾಣದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆಯು ಎಲ್.ಐ.ಸಿ ಕಚೇರಿ ಸಮೀಪದ ಬಳಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿತು. ಈ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತೀವ್ರ ತಳ್ಳಾಟ-ನೂಕಾಟ ಉಂಟಾಯಿತು.

ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯ ಜಂಟಿ ಕಾರ್ಯದರ್ಶಿ ರಜೀಶ್ ವೆಳ್ಳಾಟ್, ವೈದ್ಯಕೀಯ ಲೋಪದ ವಿರುದ್ಧ ಸಮಗ್ರ ತನಿಖೆ ನಡೆಸಿ ಹೊಣೆಗಾರರನ್ನು ಶಿಕ್ಷಿಸಬೇಕೆಂದು ಒತ್ತಾಯಿಸಿದರು.ಘಟನೆಯಲ್ಲಿ ಭಾಗಿಯಾದ ಹಲವು ನಾಯಕರು ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!