ಡಾ. ಇಂಚರ ನಾರಾಯಣಸ್ವಾಮಿ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’

ಮಂಗಳೂರು:ಕೋಲಾರ ಜಿಲ್ಲೆಯ ಖ್ಯಾತ ಸಾಹಿತಿ, ರಂಗ ನಿರ್ದೇಶಕ ಹಾಗೂ ರಂಗ ಇಂಚರ ಟ್ರಸ್ಟ್‌ನ ಅಧ್ಯಕ್ಷ ಡಾ. ಇಂಚರ ನಾರಾಯಣಸ್ವಾಮಿ ಅವರನ್ನು ಪ್ರತಿಷ್ಠಿತ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ಗೆ ಆಯ್ಕೆ ಮಾಡಲಾಗಿದೆ.

ಸಾಹಿತ್ಯ, ರಂಗಭೂಮಿ ಹಾಗೂ ಕನ್ನಡ ಭಾಷೆಯ ಬೆಳವಣಿಗೆಗೆ ನೀಡಿರುವ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಡಾ. ಇಂಚರ ನಾರಾಯಣಸ್ವಾಮಿ ಅವರು 2025ರಲ್ಲಿ ಕೋಲಾರ ಕನ್ನಡ ಭವನ ಜಿಲ್ಲಾ ಘಟಕ, ಮೇಘಮೈತ್ರಿ ಸಾಹಿತ್ಯ ಸಂಘ ಹಾಗೂ ಗಡಿನಾಡು ಕನ್ನಡಿಗರ ಸಹಯೋಗದಲ್ಲಿ ಬಿ. ಶಿವಕುಮಾರ್ ಮತ್ತು ಡಾ. ವಾಮನ್ ರಾವ್ ಬೇಕಲ್ ಅವರ ನೇತೃತ್ವದಲ್ಲಿ ಆಯೋಜಿಸಲಾದ ‘ಕೋಲಾರ ಗಡಿ ಸಮ್ಮೇಳನ’ದ ಸರ್ವಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಅವರ ಸಾಹಿತ್ಯ, ರಂಗಭೂಮಿ ಹಾಗೂ ಕನ್ನಡ ಸೇವೆಯನ್ನು ಗುರುತಿಸಿ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಸಾಹಿತ್ಯ ಹಾಗೂ ಸಾಂಸ್ಕೃತಿಕ ವಲಯದ ಗಣ್ಯರು ಆಯ್ಕೆಯನ್ನು ಸ್ವಾಗತಿಸಿ ಅಭಿನಂದಿಸಿದ್ದಾರೆ

SHARE
Loading spinner

Leave a Reply

Your email address will not be published. Required fields are marked *

error: Content is protected !!