ಮಂಗಳೂರು, ಜು.16:ಕೋಲಾರದ ರಂಗ ನಿರ್ದೇಶಕ ಹಾಗೂ ಸಿನಿಮಾ ನಟ ಎ. ಚಂದ್ರಶೇಖರ್ ಅವರನ್ನು ಕನ್ನಡ ಭವನ ನೀಡುವ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’ಗೆ ಆಯ್ಕೆ ಮಾಡಲಾಗಿದೆ.

ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಹಾಗೂ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದ ಅಂಗವಾಗಿ ನಡೆಯುವ ಸಮಾರಂಭದಲ್ಲಿ ಎ. ಚಂದ್ರಶೇಖರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

