ಮಂಗಳೂರು: ಸಾಹಿತಿ ಹಾಗೂ ಬೆಂಗಳೂರು ಕೆ.ಆರ್.ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶರಣಪ್ಪ ಗಬ್ಬೂರು (ಕೋಲಾರ) ಅವರಿಗೆ ಕನ್ನಡ ಭವನ ನೀಡುವ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026” ಘೋಷಿಸಲಾಗಿದೆ.

ಜುಲೈ 26ರಂದು ನಡೆಯಲಿರುವ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


