ಮಂಗಳೂರು:ಕೋಲಾರ ಜಿಲ್ಲೆಯ ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ಅಧಿಕಾರಿ (ಸಿಆರ್ಪಿ) ಹಾಗೂ ಅತ್ಯುತ್ತಮ ಸಿಆರ್ಪಿ ಪ್ರಶಸ್ತಿ ಪುರಸ್ಕೃತ ಮುನಿರಾಜು ಕೆ.ಸಿ. ಅವರನ್ನು ಕನ್ನಡ ಭವನ ನೀಡುವ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’ಗೆ ಆಯ್ಕೆ ಮಾಡಲಾಗಿದೆ.ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಮುನಿರಾಜು ಕೆ.ಸಿ. ಅವರಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


