ಉಡುಪಿಯಲ್ಲಿ ಧಾರಾಕಾರ ಮಳೆ; ಬಿಸಿಲಿನ ಬೇಗೆಯಿಂದ ಜನರಿಗೆ ನಿರಾಳತೆ

ಉಡುಪಿ, ಜು. 17: ಹಲವು ದಿನಗಳ ವಿರಾಮದ ಬಳಿಕ ಉಡುಪಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಆರಂಭವಾದ ಧಾರಾಕಾರ ಮಳೆ ಶುಕ್ರವಾರವೂ ಮುಂದುವರಿದಿದ್ದು, ಕಳೆದ ಹಲವು ದಿನಗಳಿಂದ ತೀವ್ರ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನರಿಗೆ ನಿರಾಳತೆ ನೀಡಿದೆ.

ಕಳೆದ ಸುಮಾರು ಹತ್ತು ದಿನಗಳಿಂದ ಜಿಲ್ಲೆಯಾದ್ಯಂತ ಉಷ್ಣಾಂಶ ಹೆಚ್ಚಾಗಿ ಬೇಸಿಗೆ ವಾತಾವರಣ ನಿರ್ಮಾಣವಾಗಿತ್ತು. ತೀವ್ರ ಬಿಸಿಲಿನಿಂದ ಜನಜೀವನ ಅಸ್ತವ್ಯಸ್ತವಾಗಿದ್ದರೆ, ಕೃಷಿಕರು ಮಳೆಯ ನಿರೀಕ್ಷೆಯಲ್ಲಿದ್ದರು.ಗುರುವಾರ ರಾತ್ರಿ ಸುರಿದ ಉತ್ತಮ ಮಳೆಯಿಂದ ವಾತಾವರಣ ತಂಪಾಗಿದ್ದು, ಭತ್ತ ನಾಟಿ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆತಿದೆ. ಮಳೆಯ ಆಗಮನದಿಂದ ಭತ್ತ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದ್ದು, ಕೃಷಿ ಕಾರ್ಯಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ.

ಶುಕ್ರವಾರವೂ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!