ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಗೆ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ

ಕಾಸರಗೋಡು : ಕನ್ನಡ ಸಾಹಿತ್ಯ ಸಂಘಟಕ, ಹಿರಿಯ ಪತ್ರಕರ್ತ ಹಾಗೂ ಶಿಕ್ಷಕರಾದ ಜಯಾನಂದ ಪೆರಾಜೆ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ‘ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ’ ಪ್ರದಾನ ಮಾಡಲು ಆಯ್ಕೆ ಮಾಡಲಾಗಿದೆ.

ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಚುಟುಕು ಸಾಹಿತ್ಯ ಪರಿಷತ್, ಬರಹಗಾರರ ಸಂಘ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಗಳ ಮೂಲಕ ಕನ್ನಡ ಸೇವೆ ಸಲ್ಲಿಸಿರುವ ಪೆರಾಜೆಯವರ ಬಹುಮುಖ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ಸಮಿತಿಯ ಅಧ್ಯಕ್ಷ ಡಾ. ಕೆ.ಎನ್. ವೆಂಕಟರಮಣ ಹೊಳ್ಳ ಹಾಗೂ ಕಾಸರಗೋಡು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷಾ ಶಿಕ್ಷಕ, ಉಪನ್ಯಾಸಕ, ಪತ್ರಕರ್ತ, ಸಾಹಿತಿ, ಕವಿ, ನಿರ್ದೇಶಕ ಹಾಗೂ ತರಬೇತುದಾರರಾಗಿ ಕಳೆದ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸಿರುವ ಪೆರಾಜೆ, ಹಲವು ಕವನ ಸಂಕಲನಗಳನ್ನು ಪ್ರಕಟಿಸಿದ್ದು, ಸಾಮಾಜಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿರುವ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಸಂದರ್ಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ತಿಳಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!