ದೆಹಲಿ ದರ್ಬಾರ್‌ನಲ್ಲಿ ಸಚಿವ ಸಂಪುಟ ಕಸರತ್ತು; ಇಂದು ಅಂತಿಮ ಪಟ್ಟಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೈಕಮಾಂಡ್ ನಾಯಕರೊಂದಿಗೆ ಸರಣಿ ಸಭೆ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಇಂದೇ ಅಂತಿಮ ಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ.

ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಬುಧವಾರ ಮಧ್ಯಾಹ್ನ 2 ಗಂಟೆಗೆ ನಡೆಸುವ ಕುರಿತು ಚರ್ಚೆ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ರಾಜ್ಯಪಾಲರ ಕಚೇರಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!