ಕಾಸರಗೋಡು/ತಿರುವನಂತಪುರ: ರಾಜ್ಯದಲ್ಲಿ ಮಳೆಯ ಮುನ್ಸೂಚನೆಯಲ್ಲಿ ಬದಲಾವಣೆ ಮಾಡಲಾಗಿದ್ದು, ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಳೆ ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ. ಈ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 3 ಗಂಟೆಗಳ ಹವಾಮಾನ ಮುನ್ಸೂಚನೆ
ರಾಜ್ಯದ ಎರ್ನಾಕುಲಂ, ತ್ರೆಶೂರ್, ಪಾಲ್ಘಾಟ್ (ಪಾಲಕ್ಕಾಡ್), ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಧ್ಯಮ ಮಳೆ ಹಾಗೂ ಗಂಟೆಗೆ 40 ಕಿ.ಮೀ ವರೆಗಿನ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.ಕೇರಳ ಮತ್ತು ಲಕ್ಷದ್ವೀಪ ಕರಾವಳಿ ಪ್ರದೇಶಗಳಲ್ಲಿ ಇಂದು ಮೀನುಗಾರಿಕೆಗೆ ಯಾವುದೇ ತಡೆಯಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.


