ಮುಳ್ಳೇರಿಯ: ನರೇಂದ್ರ ಮೋದಿ ಸರ್ಕಾರದ ಜನಕಲ್ಯಾಣ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮರೆತು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಎಂ.ಎಲ್. ಅಶ್ವಿನಿ ಹೇಳಿದ್ದಾರೆ. ಪ್ರಧಾನಮಂತ್ರಿ ದಿವ್ಯಾಂಗ ಕೇಂದ್ರ, ಬಿಜೆಪಿ ಕಾಸರಗೋಡು ಜಿಲ್ಲಾ ಹೆಲ್ಪ್ಡೆಸ್ಕ್ ಹಾಗೂ ಬಿಜೆಪಿ ಬದಿಯಡ್ಕ ಮಂಡಲ ಸಮಿತಿ ಜಂಟಿಯಾಗಿ ಮುಳ್ಳೇರಿಯ ಗಣೇಶ ಕಲಾಮಂದಿರದಲ್ಲಿ ಆಯೋಜಿಸಿದ್ದ ‘ರಾಷ್ಟ್ರೀಯ ವಯೋಶ್ರೀ ಯೋಜನೆ’ಯ ನೋಂದಣಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.


ಹಿರಿಯ ನಾಗರಿಕರಿಗೆ ಐದು ಲಕ್ಷ ರೂಪಾಯಿ ಆರೋಗ್ಯ ಭದ್ರತೆ ಒದಗಿಸುವ ಆಯುಷ್ಮಾನ್ ಭಾರತ್ ಯೋಜನೆಯನ್ನು ಕೇರಳದಲ್ಲಿ ಜಾರಿಗೊಳಿಸಲು ಇದುವರೆಗೆ ಮುಂದಾಗದಿರುವುದು ಹಿರಿಯ ನಾಗರಿಕರಿಗೆ ಎಸಗುತ್ತಿರುವ ಸವಾಲಾಗಿದೆ ಎಂದು ಅಶ್ವಿನಿ ಸೇರಿಸಿದರು.


ಬಿಜೆಪಿ ಬದಿಯಡ್ಕ ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಎಂ. ಅಧ್ಯಕ್ಷತೆ ವಹಿಸಿದ್ದರು.
ದಿವ್ಯಾಂಗ ಕೇಂದ್ರವನ್ನು ಪ್ರತಿನಿಧಿಸಿ ಡಾ. ಗೋಕುಲ್, ಅಭಿನವ್, ಆಡಿಯಾಲಜಿಸ್ಟ್ ಡಾ. ಮಧುಶ್ರೀ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್, ಬದಿಯಡ್ಕ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಧರ ಬೆಳ್ಳೂರು, ಕಾರಡ್ಕ ಪಂಚಾಯತ್ ಸಮಿತಿ ಅಧ್ಯಕ್ಷ ವಸಂತ ಕೆ., ಬೆಳ್ಳೂರು ಪಂಚಾಯತ್ ಸಮಿತಿ ಅಧ್ಯಕ್ಷ ರವೀಂದ್ರನಾಥ್ ಶೆಟ್ಟಿ, ಕಾರಡ್ಕ ಪಂಚಾಯತ್ ಕಾರ್ಯದರ್ಶಿ ರತ್ನಾಕರ ರಾವ್ ಮಾತನಾಡಿದರು.


