ರಸ್ತೆ ಅಪಘಾತ ಗಾಯಾಳುಗಳಿಗೆ ₹2.5 ಲಕ್ಷವರೆಗೆ ಉಚಿತ ಚಿಕಿತ್ಸೆ: ಯು.ಟಿ. ಖಾದರ್

ಮಂಗಳೂರು: ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಪಿಎಂ ರಾಹತ್’ ಯೋಜನೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಂ ರಾಹತ್ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ₹1.50 ಲಕ್ಷ ನೆರವಿನ ಜೊತೆಗೆ ರಾಜ್ಯ ಸರ್ಕಾರದಿಂದ ₹1 ಲಕ್ಷ ಹೆಚ್ಚುವರಿ ನೆರವು ನೀಡಲಾಗುವುದು. ಇದರೊಂದಿಗೆ ಅಪಘಾತ ಗಾಯಾಳುಗಳ ಚಿಕಿತ್ಸೆಗೆ ಒಟ್ಟು ₹2.50 ಲಕ್ಷವರೆಗೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.

2014-15ರಲ್ಲಿ ರಾಜ್ಯದಲ್ಲಿ ಜಾರಿಗೊಂಡಿದ್ದ ಮುಖ್ಯಮಂತ್ರಿ ಹರೀಶ್ ಸಾಂತ್ವನ ಯೋಜನೆ ಮಾದರಿಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪಿಎಂ ರಾಹತ್ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸಿದೆ. ತಾಂತ್ರಿಕ ಕಾರಣಗಳಿಂದ ರಾಜ್ಯದಲ್ಲಿ ಯೋಜನೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡಿರಲಿಲ್ಲ. ಇದೀಗ ಅದನ್ನು ವ್ಯವಸ್ಥಿತವಾಗಿ ಜಾರಿಗೆ ತರುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!