ದೈವ ನರ್ತಕ ಲಕ್ಷ್ಮಣ ಯಾನೆ ಕಾಂತರಿಗೆ ‘ಕನ್ನಡ ಪಯಸ್ವಿನಿ ಜಾನಪದ ರತ್ನ’ ಪ್ರಶಸ್ತಿ

ಕಾಸರಗೋಡು, ಜು. 24: ದೈವ ನರ್ತನ ಹಾಗೂ ಜಾನಪದ ಕಲಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಶ್ರೀ ಲಕ್ಷ್ಮಣ ಯಾನೆ ಕಾಂತ ಅವರಿಗೆ ಅಂತರ್‌ರಾಜ್ಯ “ಕನ್ನಡ ಪಯಸ್ವಿನಿ – ಜಾನಪದ ರತ್ನ ಪ್ರಶಸ್ತಿ-2026” ಪ್ರದಾನ ಮಾಡಲಾಗುತ್ತಿದೆ.

ಜುಲೈ 26ರಂದು ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಖ್ಯಾತ ಕನ್ನಡ ಸಂಸ್ಥೆಯಾದ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ನಡೆಯುವ ಸಮಾರಂಭದಲ್ಲಿ ‘ಕನ್ನಡ ಪಯಸ್ವಿನಿ ಜಾನಪದ ರತ್ನ’ ಅಚೀವ್‌ಮೆಂಟ್ ಅವಾರ್ಡ್ ನೀಡಿ ಸನ್ಮಾನಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!