ಅಧಿಕಾರಿಗಳು–ಜನಪ್ರತಿನಿಧಿಗಳ ಸಮನ್ವಯದಿಂದ ಅಭಿವೃದ್ಧಿ ಸಾಧ್ಯ: ಶಾಸಕ ಗುರ್ಮೆ

ಉಡುಪಿ: ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಹಿರಿಯಡಕದ ದೇವಾಡಿಗರ ಸಭಾಭವನದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನಸಂಪರ್ಕ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜನರ ಮನೆಬಾಗಿಲಿಗೆ ಆಡಳಿತವನ್ನು ತಲುಪಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಜನಸಂಪರ್ಕ ಸಭೆಯ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಕ್ತವಾಗಿ ಸಲ್ಲಿಸಿ, ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ತಹಶೀಲ್ದಾರ್ ಪಿ. ಗುರುರಾಜ್, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ವಿಜಯ, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಮಮತಾ ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಜೋಗಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!