ಬೀದಿ ಬದಿ ಆಹಾರ ಮಳಿಗೆಗಳ ಮೇಲೆ ದಾಳಿ; ಅಜಿನೊಮೊಟೊ ಜಪ್ತಿ, ₹6,000 ದಂಡ

ಮಂಗಳೂರು: ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆರೋಗ್ಯ ಅಧಿಕಾರಿಗಳು ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸ್ಟೇಟ್ ಬ್ಯಾಂಕ್ ಪ್ರದೇಶದ ಬೀದಿ ಬದಿ ಆಹಾರ ಮಳಿಗೆಗಳ ಮೇಲೆ ತಪಾಸಣೆ ನಡೆಸಿ, ಆರೋಗ್ಯಕ್ಕೆ ಹಾನಿಕರವೆಂದು ಪರಿಗಣಿಸಲಾದ ಅಜಿನೊಮೊಟೊ ವಶಪಡಿಸಿಕೊಂಡಿದ್ದಾರೆ.

ತಪಾಸಣೆ ವೇಳೆ ಕೆಲವು ಮಳಿಗೆಗಳಲ್ಲಿ ನಿಯಮಬಾಹಿರವಾಗಿ ಅಜಿನೊಮೊಟೊ ಬಳಕೆ ಪತ್ತೆಯಾಗಿದ್ದು, ಅದನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಸ್ಟೇಟ್ ಬ್ಯಾಂಕ್ ಪ್ರದೇಶದಲ್ಲಿ ನಿಷೇಧಿತ ಕೃತಕ ಬಣ್ಣ ಬಳಸುತ್ತಿದ್ದ ಮೂರು ಆಹಾರ ಮಳಿಗೆಗಳಿಗೆ ಒಟ್ಟು ₹6,000 ದಂಡ ವಿಧಿಸಲಾಗಿದೆ.

ಆಹಾರ ನೈರ್ಮಲ್ಯ ಮತ್ತು ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಧಿಕಾರಿಗಳು ಸೂಚಿಸಿದ್ದು, ಆರೋಗ್ಯಕ್ಕೆ ಹಾನಿಕರ ವಸ್ತುಗಳನ್ನು ಆಹಾರ ತಯಾರಿಕೆಯಲ್ಲಿ ಬಳಸುವವರ ವಿರುದ್ಧ ಆಹಾರ ಸುರಕ್ಷತಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!