ನವದೆಹಲಿ: ಕಪ್ಪು ಸಮುದ್ರದಲ್ಲಿ ರಷ್ಯಾದ ಪ್ರಾದೇಶಿಕ ಜಲಪ್ರದೇಶದಲ್ಲಿ ಸಂಚರಿಸುತ್ತಿದ್ದ MV OMORFI ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದು, ಇನ್ನಿಬ್ಬರು ಭಾರತೀಯರು ಸುರಕ್ಷಿತರಾಗಿದ್ದಾರೆ.

ಹಡಗಿನಲ್ಲಿ ಒಟ್ಟು 10 ಸಿಬ್ಬಂದಿ ಇದ್ದು, ಅವರಲ್ಲಿ ಮೂವರು ಭಾರತೀಯರಾಗಿದ್ದರು. ಘಟನೆಯನ್ನು ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತೀವ್ರವಾಗಿ ಖಂಡಿಸಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದೆ.

ಮೃತರ ಕುಟುಂಬಕ್ಕೆ ಅಗತ್ಯ ನೆರವು ಒದಗಿಸಲು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಬಂಧಿತ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಂಇಎ ತಿಳಿಸಿದೆ. ನಾಗರಿಕ ವಾಣಿಜ್ಯ ಹಡಗುಗಳ ಮೇಲಿನ ಇಂತಹ ದಾಳಿಗಳು ಸಮುದ್ರ ಮಾರ್ಗದ ಸುರಕ್ಷತೆಗೆ ಗಂಭೀರ ಬೆದರಿಕೆ ಎಂದು ಸಚಿವಾಲಯ ಕಳವಳ ವ್ಯಕ್ತಪಡಿಸಿದೆ.


