ಮೈಸೂರು: ಪೆಟ್ರೋಲ್ ಸುರಿದುಕೊಂಡು ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಲೈವ್ ವಿಡಿಯೋ ವೈರಲ್ ಆಗಿದೆ.

ಜು.19 ರಂದು ಈ ಘಟನೆ ನಡೆದಿದೆ. ಬಾಟಲಿಯಲ್ಲಿ ಪೆಟ್ರೋಲ್ ತಂದ ರೈತ ಅದನ್ನು ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.

ಮೂವತ್ತೈದು ವರ್ಷದ ಶಿವಕುಮಾರ್ ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ.
ಕೃಷಿಗಾಗಿ ಕೈ ಸಾಲ ಮಾಡಿಕೊಂಡಿದ್ದ ಶಿವಕುಮಾರ್ ಬೆಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ನೊಂದು ಹಾಗು ಸಾಲಭಾದೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸರಸ್ವತಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.

