ಪೋಕ್ಸೊ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಸಾವು

ಕಾಸರಗೋಡು/​ಕಣ್ಣೂರು: ಪೋಕ್ಸೊ ಪ್ರಕರಣದಲ್ಲಿ ಕಣ್ಣೂರು ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಸಾವನ್ನಪ್ಪಿದ್ದಾರೆ.ಕಣ್ಣೂರಿನ ಪೆರಿಂಗಲತ್ ಹೌಸ್‌ನ ಮೊಹಮ್ಮದ್ (66) ಸಾವನ್ನಪ್ಪಿದ ದುರ್ದೈವಿ.

​ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮೊಹಮ್ಮದ್ ಅವರಿಗೆ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹವಾಸ ಮತ್ತು 10,000 ರೂಪಾಯಿ ದಂಡ ವಿಧಿಸಿತ್ತು.

ಶಿಕ್ಷೆ ಅನುಭವಿಸುತ್ತಿರುವ ವೇಳೆ ಜುಲೈ 21 ರಂದು ಅನಾರೋಗ್ಯಕ್ಕೀಡಾದ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

​ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಕೊನೆಯುಸಿರೆಳೆದಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!