ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಅದ್ಯಕ್ಷ ಸ್ಥಾನಕ್ಕೆ, ಪಕ್ಷನಿಷ್ಠೆ,ಸಂಘಟನಾ ಚಾತುರ್ಯ ಹೊಂದಿರುವ ಕಾರ್ಯಕರ್ತರ ಅಭಿಮಾನದ ನಾಯಕ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಆಯ್ಕೆಗೆ ಜಿಲ್ಲಾದ್ಯಾಂತ ಅಭಿಮತ

ತಳಮಟ್ಟದ ಪಕ್ಷ ಸಂಘಟನೆ,ಹೊಸ ಅಭಿವೃದ್ದಿಶೀಲ ಚಿಂತನೆ,ಯುವಪೀಳಿಗೆಗೆ ಪ್ರೋತ್ಸಾಹ ನೀಡಿ ಕಾರ್ಯಕರ್ತರೊಂದಿಗೆ ಕಾರ್ಯಕರ್ತನಗಿ ಬೆರೆಯುವ ಪಂಚಾಯತ್ ರಾಜ್ ಅನುಭವದ ಗಣಿ,ಉತ್ತಮ ನಾಯಕನ ಅನುಭವಕ್ಕೆ ಮನ್ನಣೆ ನೀಡುವ ಸಮಯ ಇದಾಗಿದ್ದು,
ಪಕ್ಷದ ತತ್ವ-ಸಿದ್ಧಾಂತಗಳಿಗೆ ಅಚಲ ಬದ್ಧತೆ, ಜನಸೇವೆಯ ಗುರಿ ಹಾಗೂ ಅಪಾರ ಅನುಭವದ ಮೂಲಕ ಗುರುತಿಸಿಕೊಂಡಿರುವ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಮರ್ಥ ಹಾಗೂ ಸೂಕ್ತ ಅಭ್ಯರ್ಥಿಯಾಗಿ ಕಾರ್ಯಕರ್ತರ ವಲಯದಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಅತಿಹೆಚ್ಚು ಸ್ವಾತಂತ್ರ್ಯ ಹೋರಾಟಗಾರರನ್ನು ಹೊಂದಿರುವ ಬಂಟ ಸಮುದಾಯದ ಪ್ರತಿಷ್ಠಿತ ಕುಳಾಲು ಕುಟುಂಬದ ಹಿನ್ನಲೆ ಇರುವ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು ಬಿ.ಎ. ಪದವೀಧರರಾಗಿರುತ್ತಾರೆ. ಅವರು ವಿದ್ಯಾರ್ಥಿ ದಶೆಯಲ್ಲಿಯೇ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ನಂಬಿರುವ ಹುಟ್ಟು ಕಾಂಗ್ರೇಸಿಗರಾದ ಇವರು, ಕಾಲೇಜು ಜೀವನದ ಬಳಿಕ ಅಧಿಕೃತವಾಗಿ ಅಂದಿನ ಜನಪ್ರಿಯ ಯವ ಶಾಸಕರಾಗಿದ್ದ ವಿನಯ ಕುಮಾರ್ ಸೊರಕೆಯ ಮೂಲಕ 1992 ರಲ್ಲಿ ಕಾಂಗ್ರೆಸ್ ಸದಸ್ಯತ್ವ ಪಡೆದು ಪಕ್ಷದೊಂದಿಗೆ ತಮ್ಮ ರಾಜಕೀಯ ಪಯಣ ಆರಂಭಿಸಿದರು.

ಅಭಿವೃದ್ಧಿಯಿಂದ ವಂಚಿತವಾಗಿದ್ದ ಕುಳಾಲು ಪ್ರದೇಶದಲ್ಲಿ ಸಮಾಜಸೇವೆಯ ಮೂಲಕ ಜನರ ವಿಶ್ವಾಸ ಗಳಿಸಿದ ಅವರು, ಸುಮಾರು ಸಾವಿರಕ್ಕೂ ಹೆಚ್ಚು ಜನರನ್ನು ಒಗ್ಗೂಡಿಸಿ ಕನ್ಯಾನ–ಕುಳಾಲು ಭಾಗದಲ್ಲಿ ಮಣ್ಣಿನ ರಸ್ತೆ ಹಾಗೂ ಕಾಲುದಾರಿಗಳನ್ನು ನಿರ್ಮಿಸುವ ಮೂಲಕ ಪ್ರಮುಖ ಪಾತ್ರ ವಹಿಸಿದ್ದು ಮಾತ್ರವಲ್ಲದೆ,ಕುಗ್ರಾಮವಾಗಿದ್ದ ಹುಟ್ಟೂರು ಕುಳಾಲು ಮತ್ತು ಕೊಳ್ನಾಡು ಗ್ರಾಮದ ರಸ್ತೆ ಮತ್ತು ಇತರ ಮೂಲಭೂತ ಸೌಕರ್ಯವನ್ನು ನಿರ್ಮಿಸುವುದರ ಮೂಲಕ ಗ್ರಾಮೀಣ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿದರು.

ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ್ದ ಭೂಸುಧಾರಣಾ ಕಾಯ್ದೆಯಿಂದ ತಮ್ಮ ಕುಟುಂಬದ ಆಸ್ತಿಯ ಭಾಗವನ್ನು ಕಳೆದುಕೊಂಡಿದ್ದರೂ, ಯಾವುದೇ ಅಸಮಾಧಾನ ವ್ಯಕ್ತಪಡಿಸದೆ ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ ಮತ್ತು ಬಡವರ ಪರವಾದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷದೊಂದಿಗೆ ನಿರಂತರವಾಗಿ ಸಾಗುತ್ತಿರುವ ಕುಟುಂಬದ ಪರಂಪರೆಯನ್ನು ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಮುಂದುವರಿಸಿಕೊಂಡು ಬಂದಿದ್ದಾರೆ.

1994ರಲ್ಲಿ ಮೊದಲ ಬಾರಿಗೆ ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು ಸತತ ಆರು ಬಾರಿ ಅವಧಿಗಳ ಕಾಲ, 1994ರಿಂದ 2025ರವರೆಗೆ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಈ ಅವಧಿಯಲ್ಲಿ ಎರಡು ಬಾರಿ ಅಧ್ಯಕ್ಷರಾಗಿ ಹಾಗೂ ಎರಡು ಬಾರಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಗ್ರಾಮ ಪಂಚಾಯತ್ ಆಡಳಿತದಲ್ಲಿ ಮಾದರಿ ನಾಯಕತ್ವ ಪ್ರದರ್ಶಿಸಿದ್ದಾರೆ.ಸಕಹಾರಿ ಕ್ಷೇತ್ರದಲ್ಲಿ ಮಿಂಚಿದ ಅವರು ವಿಟ್ಲಪಡ್ನೂರು ಪ್ರಾಥಮಿಕ ವ್ಯವಸಾಯ ಸಹಕಾರಿ ಸಂಘದ ನಾಲ್ಕು ಬಾರಿ ನಿರ್ದೇಶಕರಾಗಿ,ಉಪಾದ್ಯಾಕ್ಷರಾಗಿ,ಅದ್ಯಕ್ಷರಾಗಿ ಸೇವೆ ಸಲ್ಲಿಸಿ ಸದ್ರಿ ಸಂಸ್ಥೆಯನ್ನು ಕೂಡ ಒಂದುವರೆ ಕೋಟಿ ವಾರ್ಷಿಕ ಲಾಭದತ್ತ ತಲುಪಿಸಿ,ಆಕರ್ಷಕ ನೂತನ ಕೇಂದ್ರ ಕಛೇರಿ ನಿರ್ಮಿಸಿ,ಇದರ ಸಾದನೆಗಾಗಿ ಸತತ ನಾಲ್ಕು ಬಾರಿ ಜಿಲ್ಲಾ ಡಿ.ಸಿ.ಸಿ ಬ್ಯಾಕಿನಿಂದ ಸಾದನ ಪ್ರಶಸ್ತಿ ಪಡೆದಿರುತ್ತಾರೆ.

ಅವರ ನಾಯಕತ್ವದಲ್ಲಿ ಕೊಳ್ನಾಡು ಗ್ರಾಮ ಪಂಚಾಯತ್ ವಾರ್ಷಿಕ ಆಡಳಿತ ಮಾದರಿಯಗಿ ಶಾಸ್ವತ ಆದಾಯ ಸುಮಾರು 6O ಲಕ್ಷ ಗಳಿಸುವಂತೆ ಮಾಡಿದ್ದು ಮತ್ತು ಸಾಲೆತ್ತೂರು ನವಪೇಟೆ ನಿರ್ಮಾಣಕ್ಕೆ ಪ್ರಮುಖ ಶಿಲ್ಪಿಯಾಗಿದ್ದಾರೆ. ರಾಷ್ಟ್ರಪತಿ ಪ್ರದಾನ ಮಾಡುವ ರಾಷ್ಟ್ರೀಯ ನಿರ್ಮಲ ಪುರಸ್ಕಾರ, ರಾಜ್ಯ ಸರ್ಕಾರದ ನಮ್ಮ ಗ್ರಾಮ ನಮ್ಮ ಯೋಜನೆ ಪ್ರಶಸ್ತಿ, ಎರಡು ಬಾರಿ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ಗ್ರಾಮ ಪಂಚಾಯತ್ ಎಂಬ ಗೌರವವನ್ನು ಪಂಚಾಯತ್ ಪಡೆದಿರುವುದು ಅವರ ಆಡಳಿತದ ಯಶಸ್ಸಿಗೆ ಸಾಕ್ಷಿಯಾಗಿದೆ.

ಪಕ್ಷ ಸಂಘಟನೆಯಲ್ಲಿ ಕೂಡ ಅವರು ಅಪಾರ ಅನುಭವ ಹೊಂದಿದ್ದಾರೆ. ಜಿಲ್ಲಾ ಯುವ ಕಾಂಗ್ರೆಸ್ ಜಂಟಿ ಕಾರ್ಯದರ್ಶಿಯಾಗಿ ರಾಜಕೀಯ ಸಂಘಟನಾ ಪಯಣ ಆರಂಭಿಸಿದ ಅವರು, ವಿಟ್ಲ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ನಂತರ ಜಿಲ್ಲಾ ಕಾಂಗ್ರೆಸ್ ಪರವಾಗಿ ವಿಟ್ಲ, ಪುತ್ತೂರು ಹಾಗೂ ಕಡಬ ಬ್ಲಾಕ್‌ಗಳ ಉಸ್ತುವಾರಿ ವಹಿಸಿಕೊಂಡು ಸ್ಥಳೀಯ ಸಂಸ್ಥೆ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಸಾಮಾಜಿಕ ಕ್ಷೇತ್ರದಲ್ಲಿಯೂ ಅವರ ಸೇವೆ ಗಮನಾರ್ಹವಾಗಿದೆ. ಬಂಟ್ವಾಳ ತಾಲೂಕು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರ ಸಂಘಟನೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರ ಸಂಘಟನೆಯ ಅಧ್ಯಕ್ಷರಾಗಿ ಸಂಘಟನೆಯನ್ನು ಬಲಪಡಿಸಿದ್ದಾರೆ. ಬಂಟ್ವಾಳ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು, ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಕರ್ನಾಟಕ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಸಂಯೋಜಕರಾಗಿ ಹಾಗೂ ತರಬೇತುದಾರರಾಗಿ ನೇಮಕಗೊಂಡು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಗ್ರಾಮ ಸ್ವರಾಜ್ ಪ್ರತಿಷ್ಠಾನ, ಮಂಗಳೂರು ಇದರ ಅಧ್ಯಕ್ಷರಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 9,000ಕ್ಕೂ ಅಧಿಕ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗಾಗಿ 2023–24 ಹಾಗೂ 2024–25ನೇ ಸಾಲಿನಲ್ಲಿ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಮಹೋತ್ಸವಗಳನ್ನು ಯಶಸ್ವಿಯಾಗಿ ಆಯೋಜಿಸಿದ ಅನುಭವ ಅವರ ಸಂಘಟನಾ ಸಾಮರ್ಥ್ಯಕ್ಕೆ ಮತ್ತೊಂದು ನಿದರ್ಶನವಾಗಿದೆ. ಅಲ್ಲದೆ, ರಕ್ತದಾನ ಶಿಬಿರ, ವೈದ್ಯಕೀಯ ಶಿಬಿರ, ಕ್ರೀಡಾಕೂಟ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳಿಗೆ ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಸ್ತುತ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಸುದೀರ್ಘ ಪಕ್ಷನಿಷ್ಠೆ, ಸಂಘಟನಾ ಅನುಭವ, ಆಡಳಿತ ಸಾಮರ್ಥ್ಯ ಹಾಗೂ ಜನಸೇವೆಯ ಬದ್ಧತೆಯನ್ನು ಪರಿಗಣಿಸಿ, ಕೆಪಿಸಿಸಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅವರನ್ನು ನೇಮಕ ಮಾಡುವುದು ಪಕ್ಷ ಸಂಘಟನೆಗೆ ಹೊಸ ಚೈತನ್ಯ ನೀಡಲಿದ್ದು, ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿರ್ಧಾರವಾಗಲಿದೆ ಎಂಬ ಅಭಿಪ್ರಾಯ ಕಾರ್ಯಕರ್ತರು ಹಾಗೂ ಮುಖಂಡರ ವಲಯದಲ್ಲಿ ವ್ಯಕ್ತವಾಗುತ್ತಿದೆ.

ಕಳೆದ ಮೂವತೈದು ವರ್ಷದ ಇವರ ರಾಜಕೀಯ ಪಯಣದ ಸಂದರ್ಭದಲ್ಲಿ ಹಲವಾರು ಬಾರಿ ಕಾಂಗ್ರೇಸ್ ಸರಕಾರ ಬಂದಿದ್ದರೂ,ಇವರು ಸರಕಾರದ ಯಾವುದೇ ಕನಿಷ್ಟ ಗ್ರಾಮ ಮಟ್ಟದ ನಾಮನಿರ್ದೇಶನಕ್ಕೂ ಆಯ್ಕೆ ಮಾಡದಿರುವುದು ಅವರ ಪಕ್ಷನಿಷ್ಟೆಗೆ ಅಗೌರವ ಎಂದು ಕಾರ್ಯಕರ್ತರ ಅನಿಸಿಕೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!