ಕರ್ನಾಟಕದ ಆಹಾರ ಸುರಕ್ಷತೆಗೆ ಹೊಸ ನಿಯಮ: ಅಮೆರಿಕದ ಪ್ರತಿಷ್ಠಿತ Purdue ವಿಶ್ವವಿದ್ಯಾಲಯದೊಂದಿಗೆ ಸಮಾಲೋಚನೆ

ಕರ್ನಾಟಕದ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಡಾ ಯು ಟಿ ಖಾದರ್ ಅವರು ಆಹಾರ ಸುರಕ್ಷತೆ ಹಾಗೂ ಗುಣಮಟ್ಟದ ಆಹಾರ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ, ಅಮೆರಿಕದ ಇಂಡಿಯಾನಾ ರಾಜ್ಯದಲ್ಲಿರುವ ವಿಶ್ವಪ್ರಸಿದ್ಧ ಪರ್ಡ್ಯೂ (Purdue) ಯೂನಿವರ್ಸಿಟಿಯ Department of Food Scienceಗೆ ಭೇಟಿ ನೀಡಿ ತಜ್ಞರೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಾಯಿತು.

ಇತ್ತೀಚಿನ ದಿನಗಳಲ್ಲಿ ಅಸುರಕ್ಷಿತ ಹಾಗೂ ಅಸಮರ್ಪಕ ಆಹಾರ ತಯಾರಿಕೆಯಿಂದ ಉಂಟಾಗುವ ಅನಾರೋಗ್ಯದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಸುರಕ್ಷಿತ ಮತ್ತು ಗುಣಮಟ್ಟದ ಆಹಾರ ತಯಾರಿಕೆಗೆ ಅನುಸರಿಸಬೇಕಾದ ವೈಜ್ಞಾನಿಕ ವಿಧಾನಗಳು, ಆಧುನಿಕ ತಂತ್ರಜ್ಞಾನಗಳು ಹಾಗೂ ಕಟ್ಟುನಿಟ್ಟಿನ ಆಹಾರ ಸುರಕ್ಷತಾ ಮಾನದಂಡಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.

ಈ ಭೇಟಿಯು ಕರ್ನಾಟಕದ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಆಹಾರ ಸುರಕ್ಷತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಅಂತರರಾಷ್ಟ್ರೀಯ ಮಟ್ಟದ ಉತ್ತಮ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಮಹತ್ವದ ಹೆಜ್ಜೆಯಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!