ಮಂಗಳೂರು: ನಗರದ ನಂತೂರಿನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಪದವಿಪೂರ್ವನ ‘ಅಲುಮ್ನಿ ಡೇ’ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.


ಅಲುಮ್ನಿ ಡೇ’ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಶಿಕ್ಷಣವೇ ಸಮಾಜದ ಬುನಾದಿ, ಮತ್ತು ನಿಟ್ಟೆ ಎಜ್ಯುಕೇಷನ್ ಟ್ರಸ್ಟ್‌ನಂತಹ ಸಂಸ್ಥೆಗಳು ಮಾದರಿ ನಾಯಕರನ್ನು ರೂಪಿಸುತ್ತಲೇ ಬಂದಿವೆ. ಹೊಸ ನಾಯಕತ್ವದ ಜವಾಬ್ದಾರಿ ಸ್ವೀಕರಿಸುತ್ತಿರುವ ವಿದ್ಯಾರ್ಥಿಗಳು ಸವಾಲುಗಳನ್ನು ಧೈರ್ಯದಿಂದ ಎದುರಿಸಿ, ಸಮಾಜದ ಒಳಿತಿಗಾಗಿ ಶ್ರಮಿಸಿ ಎಂದು ಹೇಳಿದರು.



ತುಳು ಚಲನಚಿತ್ರ ಕ್ಷೇತ್ರದ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ರೂಪಶ್ರೀ ವರ್ಕಾಡಿ, ಮಾಡೆಲ್, ನಟ ಹಾಗೂ ನಿರ್ದೇಶಕ ಸಿದ್ಧಾರ್ಥ್ ಶೆಟ್ಟಿ ರವರನ್ನು ಸನ್ಮಾನಿಸಲಾಯಿತು.

ವಿಜೇಶ್ ನಾಯ್ಕ್ ನೇತೃತ್ವದಲ್ಲಿ ಪದಗ್ರಹಣ ಜರುಗಿತು. ಕುಮಾರಿ ಭೂಮಿ ಶೆಟ್ಟಿ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಶೆಟ್ಟಿ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸರ್ವೋತೋಮುಖ ಬೆಳವಣಿಗೆಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಬಜ್ಜೆಯ ಪಾಪ್ಯುಲರ್ ಆಂಗ್ಲ ಮಾಧ್ಯಮಾ ಶಾಲೆಯ ಆಡಳಿತಾಧಿಕಾರಿ ಗೋಪಿನಾಥ್ ಹೆಗ್ಡೆ, ಉಪಪ್ರಾಂಶುಪಾಲೆ ಅನ್ನಪೂರ್ಣ ನಾಯಕ್, ಕಾರ್ಯಕ್ರಮ ಸಂಯೋಜಕರಾದ ಸಂಗೀತ ಶೆಟ್ಟಿ, ವೀಣಾ ಉಳ್ಳಾಲ್, ಗೀತಾ, ಶರತ್, ಸುಪ್ರಿಯಾ, ಪ್ರಣಿತಾ, ಅಮೃತಜ್ಯೋತಿ ಉಪಸ್ಥಿತರಿದ್ದರು.

ಎನ್‌ಎಸ್‌ಎಎಂ ಪಿಯು ಕಾಲೇಜಿನ ಮಾಜಿ ಹಳೆವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ವಿಜೇಶ್ ನಾಯಕ್ ಸ್ವಾಗತಿಸಿದರು. ನೂತನ ಅಧ್ಯಕ್ಷೆ ಭೂಮಿಕ ಶೆಟ್ಟಿ ವಂದಿಸಿದರು. ಅನ್ವೀತಾ ಭಟ್ ಕಾರ್ಯಕ್ರಮ ನಿರೂಪಿಸಿದರು.

