ಬಂಟ್ವಾಳ: ಬ್ರಹ್ಮರ ಕೂಡ್ಲು ವಿನ ಪ್ರಖ್ಯಾತ ಜ್ಯೋತಿಷರಾದ ಅನಿಲ್ ಪಂಡಿತ್ ಅವರ ವಿರುದ್ಧ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆಗಳು ಹಾಗೂ ಅಸಭ್ಯ ಪದಗಳನ್ನು ಬಳಸಿ ತೇಜೋವಧೆ ನಡೆಸುತ್ತಿರುವುದಾಗಿ ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.


ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.
ದೂರು ಸಲ್ಲಿಸುವ ಸಂದರ್ಭದಲ್ಲಿ ಹಲವಾರು ಸಂಘಮಿತ್ರರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದು, ಇಂತಹ ಅವಹೇಳನಕಾರಿ ಕೃತ್ಯಗಳನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಪೊಲೀಸರು ದೂರು ಸ್ವೀಕರಿಸಿ ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.


