ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಡಾ. ಶಾಂತಾ ಪುತ್ತೂರಿಗೆ ನಾಡೋಜ ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಾಹಿತಿ, ಶಿಕ್ಷಕಿ,ಸಂಘಟಕಿ, ಸಂಪನ್ಮೂಲ ವ್ಯಕ್ತಿ ಆದ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಡಾ.ಶಾಂತಾ ಪುತ್ತೂರು ರವರಿಗೆ ನಾಡೋಜ ಡಾ.ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ 2026ನ್ನು ಜುಲೈ 26ರಂದು ಗಡಿನಾಡು ಕಾಸರಗೋಡಿನ ಕನ್ನಡ ಭವನದರಜತ ಸಂಭ್ರಮದ ಸಮಾರೋಪ ಸಮಾರಂಭ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಶ್ರೀಮದ್ ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಹಸ್ತಗಳಿಂದ ಪ್ರದಾನ ಮಾಡಲಾಯಿತು.


ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಕಾಸರಗೋಡು ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ.ವಾಮನ್ ರಾವ್ ಬೇಕಲ್, ವಿಧಾನ ಪರಿಷತ್ ಮಾಜಿ ಸದಸ್ಯ ರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸಮ್ಮೇಳನ ಸರ್ವಾಧ್ಯಕ್ಷರಾದ ಡಾ.ಸಿ.ಸೋಮಶೇಖರ್, ಸಮ್ಮೇಳನ ಸಮಿತಿ ಅಧ್ಯಕ್ಷ ರಾದ ಡಾ.ಕೆ.ಎನ್ ವೆಂಕಟರಮಣ ಹೊಳ್ಳ,ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕರಾದ ಪತ್ರಕರ್ತ ಜಯಾನಂದ ಪೆರಾಜೆ, ಕನ್ನಡ ಭವನದ ಸಂಚಾಲಕಿ ಸಂಧ್ಯಾರಾಣಿ ಟೀಚರ್,ಜಾನಪದ ಪರಿಷತ್ತಿನ ಡಾ.ಬಾಲಾಜಿ,ವಸಂತ ಕೆರೆಮನೆ,ಡಾ.ಸುರೇಶ್ ನೆಗಳಗುಳಿ,ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.


ಶ್ರೀ ವಿಶಾಲಾಕ್ಷ ಪುತ್ರಕಳ ಹಾಗೂ ಶ್ರೀಮತಿ ರೇಖಾಸುದೇಶ್ ರಾವ್ ಕಾರ್ಯಕ್ರಮ ನಿರೂಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!