ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ: ನೇತ್ರಾವತಿ ನೀರಿನ ಮಟ್ಟ ಏರಿಕೆ, ಜನಜೀವನ ಅಸ್ತವ್ಯಸ್ತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರಿದಿದ್ದು, ಕಳೆದ ರಾತ್ರಿ ಆರಂಭವಾದ ಭಾರೀ ಮಳೆ ಶನಿವಾರವೂ ನಿರಂತರವಾಗಿ ಸುರಿಯುತ್ತಿದೆ. ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಹಾಗೂ ಕಚೇರಿಗಳಿಗೆ ತೆರಳುತ್ತಿದ್ದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸಿದರು.

ನಗರದ ಹಲವೆಡೆ ರಸ್ತೆಗಳಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ಕೆಲಕಾಲ ಸಂಚಾರ ನಿಧಾನಗೊಂಡಿತು.

ನಿರಂತರ ಮಳೆಯಿಂದ ಜಿಲ್ಲೆಯ ಪ್ರಮುಖ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ನೇತ್ರಾವತಿ ನದಿಯ ನೀರಿನ ಮಟ್ಟವೂ ಏರಿಕೆಯಾಗಿದೆ. ನದಿ ತೀರ ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದ್ದು, ಹವಾಮಾನ ಇಲಾಖೆ ಮುಂದಿನ ದಿನಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!