ಎಸ್‌ಡಿಪಿಐ –S I R ಮಂಗಳೂರು ಗ್ರಾಮಾಂತರ ಜಿಲ್ಲಾ ಲೀಗಲ್ ಸೆಲ್ ರಚನೆ

ಬಿ ಸಿ ರೋಡ್ : ವಿಶೇಷ ತೀವ್ರ ಮತದಾರರ ಪಟ್ಟಿಯ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಎನ್ಯೂಮರೇಷನ್ ಫಾರ್ಮ್ ಸಲ್ಲಿಕೆ ಅವಧಿ ಮುಕ್ತಾಯಗೊಂಡ ನಂತರ ನಡೆಯಲಿರುವ ವಿವಿಧ ಪ್ರಕ್ರಿಯೆಗಳು ಹಾಗೂ ಮತದಾರರ ಹಕ್ಕುಗಳ ರಕ್ಷಣೆಗಾಗಿ ಅಗತ್ಯ ಕಾನೂನು ನೆರವು ಮತ್ತು ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯನ್ನು ಒಳಗೊಂಡ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ S I R ಜಿಲ್ಲಾ ಲೀಗಲ್ ಸೆಲ್ ಅನ್ನು ರಚಿಸಿದೆ.

ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದ್ದು, Adv.ಕಬೀರ್ ಕೆಮ್ಮಾರ, Adv.ಅಸ್ಮಾ ಬೆಳ್ತಂಗಡಿ, Adv.ತಾಜುದ್ದೀನ್ ಪುಂಜಾಲಕಟ್ಟೆ, Adv.ರಶೀದ್ ಗೂನಡ್ಕ ಹಾಗೂ Adv.ಬಾತಿಶ್ ಪೆರಾಜೆ ಅವರು ಲೀಗಲ್ ಸೆಲ್ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.

S I R ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರು ಎದುರಿಸಬಹುದಾದ ಕಾನೂನು ಸಂಬಂಧಿತ ಸಮಸ್ಯೆಗಳು, ಆಕ್ಷೇಪಣೆಗಳು, ಮೇಲ್ಮನವಿಗಳು ಹಾಗೂ ಇತರೆ ಅಗತ್ಯ ವಿಷಯಗಳಲ್ಲಿ ಮಾರ್ಗದರ್ಶನ ಮತ್ತು ಕಾನೂನು ಸಹಾಯವನ್ನು ಈ ಲೀಗಲ್ ಸೆಲ್ ಮೂಲಕ ಒದಗಿಸಲು ತೀರ್ಮಾನಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಹಾಗೂ ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಮದ್ದ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!